ಅಮೃತಸರ, ಇಲ್ಲಿನ ಬಾಬಾ ಬಕಲಾ ಪ್ರದೇಶದ ಬುಲ್ಲಿ ನಂಗಲ್ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ 23 ವರ್ಷದ ಗರ್ಭಿಣಿ ಪತ್ನಿಯನ್ನು ಹಾಸಿಗೆಗೆ ಕಟ್ಟಿ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಸುಖದೇವ್ ಸಿಂಗ್ ತನ್ನ ಪತ್ನಿಯೊಂದಿಗೆ ಜಗಳವಾಡಿದ ನಂತರ ಸುಟ್ಟು ಹಾಕಿದ್ದಾನೆ.

ಆರು ತಿಂಗಳ ಗರ್ಭಿಣಿ ಮತ್ತು ಅವಳಿ ಮಕ್ಕಳ ನಿರೀಕ್ಷೆಯಲ್ಲಿದ್ದ ತನ್ನ ಪತ್ನಿ ಪಿಂಕಿಯನ್ನು ಸುಖದೇವ್ ಹಾಸಿಗೆಗೆ ಕಟ್ಟಿ ಬೆಂಕಿ ಹಚ್ಚಿದ್ದಾನೆ ಎಂದು ಅವರು ಹೇಳಿದ್ದಾರೆ.

ಘಟನೆಯ ಬಗ್ಗೆ ಗ್ರಾಮದ ಸರಪಂಚರಿಂದ ಮಾಹಿತಿ ಪಡೆದ ಪೊಲೀಸರು ಮನೆಗೆ ಬರುವಷ್ಟರಲ್ಲಿ ಮಹಿಳೆ ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದಳು.

ಕೃತ್ಯದ ನಂತರ ಪರಾರಿಯಾಗಿದ್ದ ಸುಖದೇವ್‌ನನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಖದೇವ್ ಮತ್ತು ಪಿಂಕಿ ಎರಡೂವರೆ ವರ್ಷಗಳ ಹಿಂದೆ ಮದುವೆಯಾಗಿದ್ದರು.